ಬ್ಯಾಟಿಂಗ್ನಲ್ಲಿ ಸದಾ ಅಬ್ಬರಿಸುವ ಟೀಮ್ ಇಂಡಿಯಾದ ಯುವ ತಾರೆ ಯಶಸ್ವಿ ಜೈಸ್ವಾಲ್, ಇದೀಗ ತಮ್ಮ ಮಿಂಚಿನ ಫೀಲ್ಡಿಂಗ್ನಿಂದಲೂ ಮೋಡಿ ಮಾಡಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಂದು ಗಾಳಿಯಲ್ಲಿ ಜಿಗಿದು ಒಂದೇ ಕೈಯಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿಯುವ ಮೂಲಕ ಅರ್ಧಶತಕ ಗಳಿಸಿ ಅಪಾಯಕಾರಿಯಾಗುತ್ತಿದ್ದ ಡೆವೊನ್ ಕಾನ್ವೇಗೆ ಜೈಸ್ವಾಲ್ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಂದು ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅದ್ಭುತ ಫೀಲ್ಡಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.