ಬರ ಪರಿಹಾರ, ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರ ಮತ್ತು ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ತಮಿಳುನಾಡು ಸಿಎಂ ವಿಜಯ್ ವಿರುದ್ಧವೂ ಕಿಡಿಕಾರಿದ್ದಾರೆ. ಹುಡುಗಾಟದ ಹುಡುಗ ಅಂದ್ರೆ ರಾಹುಲ್ ಗಾಂಧಿ ಎಂದೂ ಅವರು ವ್ಯಂಗ್ಯವಾಡಿದ್ದಾರೆ. ಬೆಂಗಳೂರು, ನವೆಂಬರ್ 29: ಬರ ಪರಿಹಾರ ವಿಚಾರದಲ್ಲಿ ಕೇಂದ್ರಕ್ಕೆ ಸಿಎಂ ಡಿಕೆ ಶಿವಕುಮಾರ್ ಡೆಡ್ಲೈನ್ ನೀಡಿರುವು ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಪಾಪರ್ ಆಗಿರೋದಕ್ಕೆ ಇದಕ್ಕಿಂತ ಉದಾಹರಣೆ ಬೇಕಾ? ದೇಶದ ಎಲ್ಲಾ ರಾಜ್ಯಗಳ ಬಗ್ಗೆ ಒಂದೇ ಸಭೆ ಆಗೋದು. ಕಾನೂನಿನ ಬಗ್ಗೆ ಅಧಿಕಾರಿಗಳು ಸಿಎಂ ಡಿ.ಕೆ.