ನವದೆಹಲಿ : ಬಹಚರ್ಚಿತ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಅಂಗೀಕಾರ ಪಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ಸಂಸತ್ತಿನ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ಮುಂಗಾರು ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯುವ ಸರ್ಕಾರದ ಪ್ರಯತ್ನ ವಿಫಲವಾಗಿತ್ತು. ಆ.13ರಂದು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟ ಸಂಸತ್ತಿನ ಮುಂಗಾರು ಅಧಿವೇಶನ ಇನ್ನೂ ಅಧಿಕೃತವಾಗಿ ಅಂತ್ಯಗೊಳ್ಳದ ಹಿನ್ನೆಲೆಯಲ್ಲಿ ಈ ವಿಶ್ಲೇಷಣೆ ಮುನ್ನೆಲೆಗೆ ಬಂದಿದೆ. ಈಗ ಮಂಡನೆ ಏಕೆ?: ಏಪ್ರಿಲ್ ಮತ್ತು ಮೇನಲ್ಲಿ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ, ಇಂಡಿಯಾ ಕೂಟದ ಭಾಗವಾಗಿದ್ದ ಟಿಎಂಸಿ ಮತ್ತು ಡಿಎಂಕೆ ಕ್ರಮವಾಗಿ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಅಧಿಕಾರ ಕಳೆದುಕೊಂಡವು.