ವಿಜಯ್ ಸೇತುಪತಿ ಜೊತೆ ನಗುತ್ತಾ ಕಾಲರ್ ಹಿಡಿದಿರುವ ಫೋಟೋ ಹಂಚಿಕೊಂಡಿರುವ ರಾಜ್ ಬಿ ಶೆಟ್ಟಿ, ‘ಪಾಕೆಟ್ ನಾವೆಲ್’ ಚಿತ್ರದ ಬಿಡುಗಡೆ ದಿನಾಂಕ ಪ್ರಕಟಿಸಿದ್ದಾರೆ. ತ್ಯಾಗರಾಜನ್ ಕುಮಾರರಾಜ ನಿರ್ದೇಶನದ ಈ ಸಿನಿಮಾ ಜನವರಿ 14ರಂದು ತೆರೆಗೆ ಬರಲಿದೆ. ಮಾಳವಿಕಾ ಮೋಹನನ್ ಮತ್ತು ಕಿಶೋರ್ ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡದ ಪ್ರತಿಭಾವಂತ ನಟ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿ ಈಗ ತಮಿಳು ಚಿತ್ರರಂಗದಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ಸದ್ಯ ಅವರು ಖ್ಯಾತ ನಿರ್ದೇಶಕ ತ್ಯಾಗರಾಜನ್ ಕುಮಾರರಾಜ ಆಕ್ಷನ್ ಕಟ್ ಹೇಳಿರುವ ‘ಪಾಕೆಟ್ ನಾವೆಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಕಾಲಿವುಡ್ ಸ್ಟಾರ್ ನಟ ವಿಜಯ್ ಸೇತುಪತಿ ಜೊತೆ ರಾಜ್ ಬಿ ಶೆಟ್ಟಿ ತೆರೆ ಹಂಚಿಕೊಂಡಿದ್ದಾರೆ.