ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ 13ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ, 2027ರ ಜನವರಿ 1ರಿಂದ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಲಿಖಿತ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗಿನ ಚರ್ಚೆ ಬಳಿಕದ ತೀರ್ಮಾನಗಳನ್ನು ಟಿಪ್ಪಣಿ ರೂಪದಲ್ಲಿ ಸಿಎಂ ಕಚೇರಿ ಹೊರಡಿಸಿದೆ. ಬೆಂಗಳೂರು, ನವೆಂಬರ್ 29: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ 13ನೇ ದಿನಕ್ಕೆ ಕಾಲಿಟ್ಟ ಬೆನ್ನಲ್ಲೇ, ಪ್ರತಿಭಟನಾಕಾರರನ್ನು ಸಮಾಧಾನಿಸುವ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.