ಕ್ರೈಸ್ಟ್ಚರ್ಚ್ ಟೆಸ್ಟ್ನಲ್ಲಿ ಆತಿಥೇಯ ನ್ಯೂಝಿಲೆಂಡ್ ಮೇಲುಗೈ ಸಾಧಿಸಿದ್ದು, ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಧ್ರುವ್ ಜುರೆಲ್ ಅವರ ಏಕಾಂಗಿ ಹೋರಾಟದ ನಡುವೆಯೂ ಮೊದಲ ಇನ್ನಿಂಗ್ಸ್ ಹಿನ್ನಡೆ ಅನುಭವಿಸಿದ ಭಾರತ, ಇದೀಗ ದ್ವಿತೀಯ ಇನ್ನಿಂಗ್ಸ್ನಲ್ಲೂ ಕಿವೀಸ್ ಬ್ಯಾಟರ್ಗಳನ್ನು ಕಟ್ಟಿಹಾಕಲು ಪರದಾಡುತ್ತಿದೆ. ಮೂರನೇ ದಿನದಂತ್ಯಕ್ಕೆ 243 ರನ್ಗಳ ಮುನ್ನಡೆ ಗಳಿಸಿರುವ ನ್ಯೂಝಿಲೆಂಡ್, ಬೃಹತ್ ಗುರಿಯತ್ತ ದಾಪುಗಾಲಿಟ್ಟಿದೆ. ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ತಂಡ ಬಿಗಿ ಹಿಡಿತ ಸಾಧಿಸಿದೆ.