ಬಿಗ್ ಬಾಸ್ ಖ್ಯಾತಿಯ ನಟಿ ಸ್ಪಂದನಾ ಸೋಮಣ್ಣ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ಪ್ರಿಯಕರ ವರುಣ್ ಮುನಿರಾಜು ಜೊತೆಗೆ ಸ್ಪಂದನಾ ಅವರ ವಿವಾಹ ಸಮಾರಂಭ ನೆರವೇರಿದೆ. ಮೈಸೂರಿನಲ್ಲಿ ಇಂದು (ನವೆಂಬರ್ 29) ಅದ್ದೂರಿಯಾಗಿ ಮದುವೆ ನಡೆದಿದ್ದು, ಈ ಸಂದರ್ಭದ ವಿಡಿಯೋಗಳು ವೈರಲ್ ಆಗಿವೆ. ಕಿರುತೆರೆಯ ಖ್ಯಾತ ನಟಿ, ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಸ್ಪಂದನಾ ಸೋಮಣ್ಣ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳೆಯ ವರುಣ್ ಮುನಿರಾಜು ಜೊತೆ ಸ್ಪಂದನಾ ಅವರು ಸಪ್ತಪದಿ ತುಳಿದಿದ್ದಾರೆ. ಚಿತ್ರರಂಗ ಹಾಗೂ ಕಿರುತೆರೆಯ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಈ ಮದುವೆಗೆ ಸಾಕ್ಷಿಯಾಗಿದ್ದಾರೆ.