ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಚಿತ್ರ ಬಾಕ್ಸ್ ಆಫೀಸ್ನಲ್ಲಿ 1,790 ಕೋಟಿ ಗಳಿಸಿ ಬಾಹುಬಲಿ 2 ದಾಖಲೆ ಮುರಿದಿದೆ. ಇದರ ಬೆನ್ನಲ್ಲೇ ನಿರ್ಮಾಪಕ ನಮಿತ್ ಮಲ್ಹೋತ್ರಾ ಜಿಟಿಎ ಮಾದರಿಯಲ್ಲಿ ರಾಮಾಯಣ ವಿಡಿಯೋ ಗೇಮ್ ತರುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಥೀಮ್ ಪಾರ್ಕ್ ನಿರ್ಮಿಸುವ ಬೃಹತ್ ಯೋಜನೆಯನ್ನು ಅವರು ಹಂಚಿಕೊಂಡಿದ್ದಾರೆ. ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಚಿತ್ರವು ಈಗಾಗಲೇ ಜಾಗತಿಕ ಮಟ್ಟದಲ್ಲಿ 1,790 ಕೋಟಿ ರೂಪಾಯಿ ಗಳಿಸಿ ದಾಖಲೆ ಬರೆದಿದೆ. ಈ ಯಶಸ್ಸಿನ ಬೆನ್ನಲ್ಲೇ ನಿರ್ಮಾಪಕ ನಮಿತ್ ಮಲ್ಹೋತ್ರಾ ಮತ್ತೊಂದು ದೊಡ್ಡ ಘೋಷಣೆ ಮಾಡಿದ್ದಾರೆ.