ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ 6 ಜನರಿಗೆ ಗಂಭೀರ ಗಾಯಗಳಾಗಿದೆ. ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಚೇಳೂರು ರಸ್ತೆಯ ಎಂಆರ್ಪಿಎಲ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸೋಮವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಸಂಜೆ 7 ಗಂಟೆ ಸಮಯದಲ್ಲಿ ಈ ಭೀಕರ ಘಟನೆ ಜರುಗಿದೆ. ಟೈರ್ ಸ್ಫೋಟದಿಂದ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ಬಸ್, ಆಟೋ ಮತ್ತು ಬೈಕ್ಗಳಿಗೆ ಗುದ್ದಿದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.