ಡಾ. ಹೆಚ್.ಸಿ. ಮಹದೇವಪ್ಪ ಅವರು ಬಸವಣ್ಣ ಮತ್ತು ಅಂಬೇಡ್ಕರ್ ಅವರಿಗೆ ಅವಮಾನಿಸುವ ಮನುವಾದದ ವಿಕೃತ ಮನಸ್ಸುಗಳನ್ನು ಖಂಡಿಸಿದ್ದಾರೆ. ಬಸವಣ್ಣನವರ ಸಮಾನತೆ ಮತ್ತು ಸಾಮಾಜಿಕ ಸುಧಾರಣಾ ಹೋರಾಟಗಳನ್ನು ವಿವರಿಸಿದ್ದಾರೆ. ಅಲ್ಲದೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ತಮ್ಮನ್ನು ತಾವು ಪರಿಗಣಿಸದೆ, ಮುಖ್ಯಮಂತ್ರಿ ಅಭ್ಯರ್ಥಿ ಎಂಬರ್ಥದ ಮಾತುಗಳನ್ನಾಡಿದ್ದಾರೆ. ವಿಜಯಪುರ, ನವೆಂಬರ್ 29: ‘ವರ್ಕಿಂಗ್ ಪ್ರೆಸಿಡೆಂಟ್ ನನ್ನ ಯೋಗ್ಯತೆಗೆ ಸರಿಯಾದ ಹುದ್ದೆಯಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್’ ಎಂದು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕೆಂಬ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಕಾರ್ಯಾಧ್ಯಕ್ಷ ಆಗುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ, ಸದಸ್ಯನಾಗಿದ್ದೇನೆ.