ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಾಜಿ ಪ್ರಿಯತಮನಿಂದ ಖಾಸಗಿ ವಿಡಿಯೋ ಲೀಕ್ ಮಾಡಿರುವ ಆರೋಪ ಕೇಳಿಬಂದಿದೆ. ಅಶ್ಲೀಲ ವೆಬ್ಸೈಟ್ನಲ್ಲಿ ವಿಡಿಯೋ ಕಂಡು ಯುವತಿ ಆಘಾತಗೊಂಡಿದ್ದು, ತಕ್ಷಣ ಪೊಲೀಸರ ಮೊರೆ ಹೋಗಿದ್ದಾಳೆ. ಸದ್ಯ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು, ನವೆಂಬರ್ 29: ಪ್ರೀತಿ ಹೆಸರಿನಲ್ಲಿ ಮಾಜಿ ಪ್ರಿಯತಮನಿಂದ ಯುವತಿಗೆ ಲೈಂಗಿಕ ದೋಖಾ ಎಸಗಿದ್ದು, ಖಾಸಗಿ ವಿಡಿಯೋಗಳನ್ನು ಅಶ್ಲೀಲ ವೆಬ್ಸೈಟ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸದ್ಯ ಈ ಕುರಿತಾಗಿ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.