ಬನ್ನೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೂರಾರು ಸಮಾಜಮುಖಿ ಸೇವೆಗಳು ನಿರಂತರವಾಗಿ ನಡೆಯುತ್ತಿದ್ದು, ಜನಸಾಮಾನ್ಯರ ಜೀವನ ಮಟ್ಟ ಸುಧಾರಿಸಲು ನೆರವಾಗುತ್ತದೆ ಎಂದು ಮೈಮುಲ್. ಚೆಲುವರಾಜು ಅಭಿಪ್ರಾಯಪಟ್ಟರು.ಪಟ್ಟಣದ ಕಗ್ಗಲೀಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್, ಶ್ರೀ ಅಷ್ಟಲಕ್ಷ್ಮೀ ಪೂಜಾ ಸಮಿತಿ ಸೋಮನಾಥಪುರ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಅಷ್ಟ ಲಕ್ಷ್ಮೀ ಸಾಮೂಹಿಕ ಪೂಜೆ ಮತ್ತು ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆರಂಭವಾದ ನಂತರ ಹಳ್ಳಿಗಳಲ್ಲಿ ಮಹಿಳೆಯರು ಹೆಚ್ಚು ಸ್ವಾವಲಂಬನೆ ಬದುಕನ್ನು ಕಟ್ಟಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯರು ಕುಟುಂಬದ ಕಣ್ಣಾಗಿ ಅನಕ್ಷರಸ್ಥರು ಅಕ್ಷರಸ್ಥರಾಗಿ ಜೀವನ ನಡೆಸುವಂತಾಗಿದೆ.