ಹನಗೋಡು: ಹೋಬಳಿಯ ವಡ್ಡಂಬಾಳು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಬಲ್ಕ್ ಮಿಲ್ಕ್ ಕೂಲರ್(ಬಿಎಂಸಿ) ಕೇಂದ್ರವನ್ನು ಶಾಸಕ ಜಿ.ಡಿ.ಹರೀಶ್ಗೌಡ ಶನಿವಾರ ಉದ್ಘಾಟಿಸಿದರು.ನಂತರ ಮಾತನಾಡಿ, ಗ್ರಾಮೀಣ ಭ. ಹೈನುಗಾರರು ಉತ್ಪಾದಿಸುವ ಹಾಲನ್ನು ಗುಣಮಟ್ಟದೊಂದಿಗೆ ಸಂಗ್ರಹಿಸಿ ಸಂರಕ್ಷಿಸುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಬಿಎಂಸಿ ಕೇಂದ್ರಗಳು ಮಹತ್ವದ ಪಾತ್ರ ವಹಿಸಲಿವೆ ಎಂದರು.ಬಿಎಂಸಿ ಕೇಂದ್ರ ಸ್ಥಾಪನೆಯಿಂದ ಗ್ರಾಮದಲ್ಲಿಯೇ ಹಾಲು ಸಂಗ್ರಹಿಸಿ ತಂಪಾಗಿಡಲು ಅನುಕೂಲವಾಗಲಿದೆ. ಇದರಿಂದ ಹಾಲಿನ ಗುಣಮಟ್ಟ ಕಾಪಾಡುವುದರ ಜತೆಗೆ ಹೈನುಗಾರರಿಗೆ ಉತ್ತಮ ಸೇವೆ ದೊರೆಯಲಿದೆ. ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನೂ ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು. ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿಗೆ ಆಡಳಿತ ಮಂಡಳಿ ಹಾಗೂ ಉತ್ಪಾದಕರು ಪರಸ್ಪರ ಸಹಕಾರ ನೀಡಬೇಕು ಎಂದು ತಿಳಿಸಿದರು.