ಬಿಡದಿ ಟೌನ್ಶಿಪ್ಗೆ ಮುಂದಾಗಿರುವ ರಾಜ್ಯ ಸರಕಾರ ತಕ್ಷಣ ಸರ್ವೆ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ವಾಪಸು ಕರೆಯಿಸಿಕೊಳ್ಳಬೇಕು. ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಕೂಡಲೇ ನಿಲ್ಲಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ. ಟಿ ಎಚ್ಚರಿಕೆ ನೀಡಿದ್ದಾರೆ. ರಾಮನಗರ: ಬಿಡದಿ ಟೌನ್ಶಿಪ್ (Bidadi township) ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಆಗಿರುವ ಮೂರು ಹಳ್ಳಿಗಳ ಸರ್ವೆ ಮಾಡಲು ಬಂದಿದ್ದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆಯಲ್ಲಿ ಹೊಡೆದು ವಾಪಸ್ ಕಳಿಸಿದ ಘಟನೆ ಬಿಡದಿ ತಾಲೂಕಿನ ಮಂಡಲಹಳ್ಳಿಯಲ್ಲಿ ಸೋಮವಾರ ನಡೆದಿದೆ.