ಬೆಟ್ಟದಪುರ: ಸಮಾಜದಲ್ಲಿ ಸಮಾನತೆ, ಸ್ವಾಭಿಮಾನ ಹಾಗೂ ದೇಶಪ್ರೇಮದ ಮೌಲ್ಯಗಳನ್ನು ಸಾರಿದ ಭಕ್ತ ಕನಕದಾಸರು ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳ. ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಮಹಾನ್ ಕ್ರಾಂತಿಕಾರಿ. ಇಂತಹ ಮಹನೀಯರ ತತ್ವಾದರ್ಶ ಇಂದಿನ ಯುವಜನತೆಗೆ ಪ್ರೇರಣೆಯಾಗಬೇಕು ಎಂದರು.ಪಿರಿಯಾಪಟ್ಟಣ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಅಭಿವೃದ್ಧಿ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆಯದೆ ಜನರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ವಂಶಪಾರಂಪರ್ಯ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಷ್ಪಕ್ಷಪಾತವಾಗಿ ಜನರ ಪರವಾಗಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ ಮತದಾರರು ಅವಕಾಶ ಕಲ್ಪಿಸಬೇಕು.