ಇಂಡಿಯಾ ಒಕ್ಕೂಟದ ನಾಯಕರು ಚೆನ್ನೈನಲ್ಲಿ ಎಂಕೆ ಸ್ಟಾಲಿನ್ರನ್ನು ಭೇಟಿಯಾಗಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಕುರಿತು ಮನವೊಲಿಸಲು ಪ್ರಯತ್ನಿಸಿದರು. ಆದರೆ, ತಮಿಳುನಾಡಿನ ಹಿತಾಸಕ್ತಿಗಳನ್ನು ಮುಂದಿಟ್ಟುಕೊಂಡು ಸ್ಟಾಲಿನ್ ಎನ್ಡಿಎಗೆ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಇಂಡಿಯಾ ಒಕ್ಕೂಟಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ. ಚೆನ್ನೈ, ನವೆಂಬರ್ 29: ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆ ವಿಧೇಯಕ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಡಿಎಂಕೆ ಪಕ್ಷದ ಬೆಂಬಲ ಪಡೆಯಲು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ರನ್ನ ಮನವೊಲಿಸಲು ಚೆನ್ನೈಗೆ ತೆರಳಿದ್ದ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಒಕ್ಕೂಟದ ನಾಯಕರ ಪ್ರಯತ್ನ ವಿಫಲವಾಗಿದೆ.