Manja String Ban: ಕರ್ನಾಟಕದಲ್ಲಿ ಮಾಂಜಾ ದಾರದಿಂದ ಅಮಾಯಕರ ಜೀವಹಾನಿ; ಕಠಿಣ ಕಾನೂನು ಕ್ರಮಕ್ಕೆ ಮುಂದಾದ ಸರ್ಕಾರ, ಡಿಸಿಎಂ ಜಿ. ಪರಮೇಶ್ವರ್ ಹೇಳಿದ್ದೇನು Hubballi Manja String Death: Karnataka Govt Vows Strict Action Against Ban Violators. ಕರ್ನಾಟಕದಲ್ಲಿ ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಆಗುತ್ತಿದ್ದು, ಈ ವಿಚಾರದಲ್ಲಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ.ಸ್ಕೂಟಿಯಲ್ಲಿ ತೆರಳುತ್ತಿದ್ದ ಹುಬ್ಬಳ್ಳಿಯ ವಿದ್ಯಾ ಮಂಜುನಾಥ ಗೌಡರ್ ಅವರ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ದಾರುಣ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಅಮಾಯಕ ಜೀವವೊಂದನ್ನು ಬಲಿಪಡೆದ ಈ ಘಟನೆ ತೀವ್ರ ನೋವು ಮತ್ತು ಕಳವಳವನ್ನುಂಟು ಮಾಡಿದೆ.